ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ : ಗೋವಾ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದ ತದಡಿಯ ಮೀನುಗಾರ ನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅನಂತ್ ಅಂಬಿಗ (52)ಮೃತ ಮೀನುಗಾರನಾಗಿದ್ದು, ಕುಮಟಾ ತಾಲೂಕಿನ ತದಡಿ ಗ್ರಾಮದ ನಿವಾಸಿಯಾಗಿದ್ದಾನೆ. ಈತ ಗೋವಾದ ಶೈನಿಂಗ್ ಸ್ಟಾರ್ ಎನ್ನುವ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದು, ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ವೇಳೆ ಮೃತಪಟ್ಟಿರುವುದಾಗಿ ಹೇಳಲಾಗಿದೆ.ಕಳೆದ ಮೂರು ದಿನಗಳ ಹಿಂದೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಆತ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಸ್ಥಳೀಯ ಮೀನುಗಾರರು ಇದು ಸಹಜ ಸಾವಲ್ಲ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.ಇನ್ನೂ ಬೋಟ್ ಮಾಲಿಕರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ಬೋಟ್ ಮಾಲೀಕ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.ಈಗಾಗಲೇ ಮೃತ ಮೀನುಗಾರನ ಶವವನ್ನ ತದಡಿಗೆ ತರಲಾಗಿದೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ.
ಇದನ್ನೂ ಓದಿ