ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ಡಾಂಬರ್ ಟ್ಯಾಂಕರ್ ಹಾಗೂ ಪ್ಲೈವುಡ್ ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಬಳಿ ನಡೆದಿದೆ.
ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಹೋಗುತ್ತಿರುವ KA 47 A 1281 ಪ್ಲೈವುಡ್ ತುಂಬಿದ ಲಾರಿ ಹಾಗೂ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಹೋಗುತ್ತಿರುವ OD 14 AE 6440 ಟ್ಯಾಂಕರ್ ನಡುವೆ ಸುಂಕಸಾಳ ಕೋಟೆಪಾಳ್ ಬಳಿ ಮುಖಾ ಮುಖಿ ಅಪಘಾತ ಉಂಟಾಗಿದೆ. ಘಟನೆಯಿಂದಾಗಿ ಟ್ಯಾಂಕರ್ ಹಾಗೂ ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲಿನರ್ ಸೇರಿ ಮೂವರಿಗೆ ಗಂಭೀರವಾಗಿ ಗಾಯವಾಗಿದೆ. ಹೆದ್ದಾರಿಯಲ್ಲಿ ಅಪಘಾತ ಉಂಟಾಗಿದ್ದರಿಂದ ಒಂದು ತಾಸಿಗೂ ಹೆಚ್ಚಿನ ಸಮಯ ವಾಹನ ಸಂಚಾರ ಸ್ಥಗಿತವಾಗಿದ್ದು,
ಅಪಘಾತದ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆದ್ದಾರಿಯಲ್ಲಿನ ವಾಹನ ಸಂಚಾರ ಸುಗಮಗೊಳಿಸಿದ್ದಾರೆ. ಇನ್ನೂ ಗಾಯಗೊಂಡವರನ್ನ ಆಂಬುಲೆನ್ಸ್ ಮೂಲಕ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಸಲಾಗಿದೆ.
ಇದನ್ನೂ ಓದಿ