ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಮನೆ ಕಳ್ಳನನ್ನ ಮಾಡಿ ಪರಾರಿಯಾಗಿದ್ದ ಯುವಕನನ್ನ ಹಿಡಿದ ಸಾರ್ವಜನಿಕರು ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಸ್ನೋಟಿ ಗ್ರಾಮದಲ್ಲಿ ನಡೆದಿದೆ.

ಜೋಯಿಡಾ ತಾಲೂಕಿನ ಸಮೀರ್ ದೇಸಾಯಿ ಎಂಬಾತ ಎರಡು ದಿನದ ಹಿಂದೆ ಸುರಕ್ಷಾ ಸಾಳಂಕೆ ಎನ್ನುವವರ ಮನೆ ಕಳ್ಳತನ ಮಾಡಿ ಪರಾರಿಯಾಗಿದ್ದ,ಈತ ನಿನ್ನೆ ರಾತ್ರಿ ಗ್ರಾಮಕ್ಕೆ ವಾಪಾಸ್ ಬಂದ ವೇಳೆ‌ಯಲ್ಲಿ ಆತನ ಹಿಡಿದ ಸಾರ್ವಜನಿಕರು ಆರೋಪಿಗೆ ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿತ್ತಾಕುಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ