ಬೆಂಗಳೂರು:  ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮ್‌ಸುಂದರ್ ಅಸ್ವಸ್ಥತೆಯಿಂದಾಗಿ ಇಂದು ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಅಸ್ವಸ್ಥತೆಯಿಂದಾಗಿ ಅವರನ್ನು ವಿದ್ಯಾಪೀಠ ಸರ್ಕಲ್‌ನ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನರಾಗಿದ್ದಾರೆ.

ಅವಿವಾಹಿತರಾಗಿದ್ದ ಶ್ಯಾಮ್‌ಸುಂದರ್, ‘ಎದ್ದೇಳು ಮಂಜುನಾಥ’ ಚಿತ್ರದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವೂವಹಿಸಿದ್ದರು. ಪತ್ರಕರ್ತರಲ್ಲಿ ಅವರು ‘ಶಾಮಿ’ ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದರು.

ಸಿ‌ಎಂ‌ ಸಂತಾಪ
ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಸಿಎಂ ಸಿದ್ದರಾಮಯ್ಯ

ಇದನ್ನೂ ಓದಿ