ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕರ್ನಾಟಕದ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ಪ್ರತಿವರ್ಷ ನೀಡಲಾಗುವ ಛಾಯಾ ಸಾಧಕ ಮತ್ತು ಛಾಯಾಶ್ರೀ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷರು ಜೋಗಳೇಕರ್ ಫೋಟೋ ಸ್ಟುಡಿಯೋ ಮಾಲೀಕರಾದ ಸೂರಜ್ ಜೋಗಳೇಕರ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನ ಮಾಡಲಾಯಿತು. ಛಾಯಾಚಿತ್ರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕಾಗಿ ಅವರಿಗೆ ಈ ಗೌರವ ಲಭಿಸಿದೆ. ಸೂರಜ್ ಜೋಗಳೇಕರ್ ಅವರಿಗೆ ಪ್ರಶಸ್ತಿ ಲಭಿಸಿದ್ದಕ್ಕೆ ಕಾರವಾರ ಫೋಟೋಗ್ರಾಫರ್ ಅಸೋಸಿಯೇಷನ್ ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ