ಬೆಂಗಳೂರು : 2025ನೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಣೆಗೆ countdown ಆರಂಭವಾಗಿದೆ. ಎರಡನೇ ಪಿಯುಸಿ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು 2025 ರಲ್ಲಿ ಪ್ರಕಟವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಮೇ 2ರಂದು) ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಿದೆ, ಎಸ್ಎಸ್ಎಲ್ಸಿ ಫಲಿತಾಂಶವನ್ನು ಹೇಗೆ ನೋಡಬೇಕು? ಯಾವ ವೆಬ್ಸೈಟ್ನಲ್ಲಿ ಫಲಿತಾಂಶಗಳನ್ನು ನೋಡಬೇಕು? ಇದನ್ನು ವಿವರವಾಗಿ ತಿಳಿದುಕೊಳ್ಳೋಣ.
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಿದೆ. ಈ ಪರೀಕ್ಷೆಯ ಫಲಿತಾಂಶಗಳನ್ನು ಮೇ 2ರಂದು (ಇಂದು) ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.ಅವರು ಈ ಸಮಯದಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ನಂತರ,ಈ ಫಲಿತಾಂಶಗಳನ್ನು ಇಲಾಖೆಯ ವೆಬ್ಸೈಟ್ಗಳಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷೆ ಬರೆದ 8 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.ಫಲಿತಾಂಶವನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದಾಗಿದೆ. 8 ಲಕ್ಷ 96 ಸಾವಿರ ವಿದ್ಯಾರ್ಥಿಗಳು ಕಳೆದ ತಿಂಗಳು ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗಳಿಗೆ ಹಾಜರಾಗಿದ್ದರು.
ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ