ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಕ್ಸಿಸ್ ಬ್ಯಾಂಕ್ ಸಂಪೂರ್ಣವಾಗಿ ಸುಟ್ಟುಕರಕಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸನ್ಮನ್ ಹೊಟೇಲ್ ಬಳಿ ಇರುವ ಎಕ್ಸಿಕ್ ಬ್ಯಾಂಕ್‌ನಲ್ಲಿ(axis Bank ) ಳಿಗ್ಗೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ದೊಡ್ಡಮಟ್ಟದಲ್ಲಿ ಹೊಗೆ ಕಾಣಿಸಿಕೊಂಡ ಬಳಿಕ ಅಕ್ಕ-ಪಕ್ಕದಲ್ಲಿನ ಜನ ಹೋಗಿ ನೋಡುವಷ್ಟರಲ್ಲಿ ಬೆಂಕಿ ಬ್ಯಾಂಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ.

ಘಟನೆಯಿಂದಾಗಿ ಬ್ಯಾಂಕ್‌ನಲ್ಲಿದ್ದ ಸುಮಾರು 12ಕ್ಕೂ ಹೆಚ್ಚು ಕಂಪ್ಯೂಟರ್ ,ಪಿಠೋಪಕರಣ, ಬ್ಯಾಂಕ್, ದಾಖಲಾತಿ ಪತ್ರಗಳು ಸಂಪೂರ್ಣ ಸುಟ್ಟುಕರಕಲಾಗಿದೆ. ಬೆಂಕಿ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಪೊಲೀಸರು ಘಟನೆ ಕುರಿತಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ