ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು :ಉತ್ತರ ಕನ್ನಡ ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ನಿರೀಕ್ಷೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮುಂತಾದ ಕರಾವಳಿ ಜಿಲ್ಲೆ ಹಾಗೂ, ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮುಂತಾದ ಉತ್ತರ ಒಳನಾಡು ಜಿಲ್ಲೆಗಳಲ್ಲಿ, ಹಾಗೂ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಮುಂತಾದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಮೇ 18ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮುಂತಾದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಮತ್ತು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಮುಂತಾದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮೇ 19ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮುಂತಾದ ಕರಾವಳಿ ಜಿಲ್ಲೆಗಳಲ್ಲಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಳಗಾವಿ, ವಿಜಯಪುರ, ಬೀದರ್, ಕಲಬುರ್ಗಿ, ರಾಯಚೂರು ಮುಂತಾದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮತ್ತು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಮುಂತಾದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ