ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ರಾಜ್ಯದ ಹಲವೆಡೆ ಕಳೆದ ಕೆಲದಿನಗಳಿಂದ ಭಾರೀ ಮಳೆ ಉಂಟಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಈಗಾಲೇ ಉತ್ತರ ಕನ್ನಡ ಜಿಲ್ಲೆಯ ಕೆಲ ಪ್ರದೇಶದಲ್ಲಿ ಆಗಾಗ ಮಳೆ ಉಂಟಾಗುತ್ತಿದೆ.ಇನ್ನೂ ಮೇ 21-22ರಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಜಿಲ್ಲೆಯಲ್ಲಿ ಈ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಳೆಯೊಂದಿಗೆ ಭಾರೀ ಗಾಳಿಗುಡುಗು ಸಹಿತ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ಇನ್ನೂ ಅಗತ್ಯವಿದ್ದಲ್ಲಿ ಮುಂಜಾಗ್ರತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದಾಗಿದೆ..
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ:
ಭಾರೀ ಮಳೆ ಉಂಟಾಗಲಿರುವ ಕಾರಣ ಅರಬ್ಬಿ ಸಮುದ್ರದಲ್ಲಿ ಅಲೆಯ ಅಬ್ಬರ ಜೋರಾಗುವ ಸಾಧ್ಯತೆಗಳಿದ್ದು,ಯಾವುದೇ ಕಾರಣಕ್ಕೂ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಅದೇ ರೀತಿ ನದಿ ಹಾಗೂ ಸಮುದ್ರ ತೀರದಲ್ಲಿ ವಾಸವಿರುವ ಜನತೆ ಕೂಡ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದು, ಯಾವುದೆ ಸಮಸ್ಯೆಗಳು ಉಂಟಾದಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ. ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು. ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳ ಬಹುದಾಗಿದೆ.
ಇದನ್ನೂ ಓದಿ