ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ನಿರ್ಮಿಸಿದ ರಸ್ತೆ ಕುಸಿತವಾಗಿದ್ದು ಶಿರಸಿ-ಕುಮಟಾ ರಸ್ತೆ ಸಂಚಾರವನ್ನ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಕುಮಟಾ ಶಿರಸಿ ಹೆದ್ದಾರಿಯಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಈ ಹೆದ್ದಾರಿಯಲ್ಲಿ ಭಾರೀ ವಾಹನ ಸಂಚಾರವನ್ನ ಬಂದ್ ಮಾಡಲಾತ್ತು. ಭಾರೀ ಮಳೆ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾದ ರಸ್ತೆ ಬೆಣ್ಣೆ ಹೊಳೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರಿ ಹರಿದ ಪರಿಣಾಮ ರಸ್ತೆ ಕೊಚ್ಚಿಕೊಂಡು ಹೋಗಿದೆ. ಸದ್ಯ ಕುಮಟಾ ಶಿರಸಿ ಹೆದ್ದಾರಿಯಲ್ಲಿ ಸಂಚಾರವನ್ನ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಕರಾವಳಿ ಮಲೆನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಕಳೆದ ಐದಾರು ವರ್ಷದಿಂದ ಹೆದ್ದಾರಿ ಕಾಮಗಾರಿಯನ್ನ ನಡೆಸಲಾಗುತ್ತಿತ್ತು. ಆದರೆ ಹೆದ್ದಾರಿಯಲ್ಲಿನ ಒಂದಿಷ್ಟು ಸೇತುವೆಗಳ ಕಾಮಗಾರಿ ಅಪೂರ್ಣವಾಗಿದ್ದರಿಂದ ಕಳೆದ ಒಂದು ವರ್ಷದಿಂದ ಭಾರೀ ವಾಹನ ಸಂಚಾರವನ್ನ ನಿಷೇಧ ಮಾಡಲಾಗಿತ್ತು.
ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರುವ ಭಾರೀ ಮಳೆ ರಸ್ತೆ ಬದಿಯಲ್ಲಿ ಕುಸಿಯುತ್ತಿರುವ ಗುಡ್ಡ ಕುಸಿತವಾಗಿದೆ..
ಸದ್ಯ ರಸ್ತೆ ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಶಿರಸಿ-ಕುಮಟಾ ರಸ್ತೆ ಸಂಚಾರಕ್ಕೆ ಜಿಲ್ಲಾಡಳಿತದಿಂದ ಸಂಚಾರ ನಿಷೇದ ಮಾಡುವಂತೆ ಆದೇಶಿಸಲಾಗಿದೆ.
ಇದನ್ನೂ ಓದಿ