ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಕೊರೊನಾ ಮಹಾಮಾರಿಯ ಭೀತಿ ಮತ್ತೆ ಹೆಚ್ಚಾಗಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಹೀಗಾಗಿ ರಾಜ್ಯದಲ್ಲಿ ನಾಳೆಯಿಂದ ಕೋವಿಡ್ ಪರೀಕ್ಷೆ ಪ್ರಾರಂಭಿಸುವ ಸಾಧ್ಯತೆ ಇದೆ.
ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿ ಇಟ್ಟುಕೊಂಡು, ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೊತೆಗೆ ಎಂಟು ಆರ್‌ಟಿಪಿಸಿಆರ್ ಪರೀಕ್ಷಾ ಲ್ಯಾಬ್‌ಗಳನ್ನು ಪುನಃ ಆರಂಭಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.
ನಿನ್ನೆವರೆಗೆ 35 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಹೆಚ್ಚುತ್ತಿರುವ ಪ್ರಕರಣಗಳ ಭೀತಿಯಿಂದ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
- ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್ : ವಿದ್ಯಾರ್ಥಿಗಳು ಸೇರಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
- ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿನ ಕೈ ಚಾಚುವಂತೆ ಮನವಿ
- ಹೊನ್ನಾವರದಲ್ಲಿ ಭೀಕರ ದುರಂತ: ಕಾರಿಗೆ ಬೆಂಕಿ, ಇಬ್ಬರು ಸಜೀವ ದಹನ
- ವಿವಾಹಕ್ಕೆ ಒಪ್ಪದ ಪ್ರೇಯಸಿ: ಪವನ್ ಭಟ್ ಆತ್ಮಹತ್ಯೆ
ರಾಜ್ಯದಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿಯೂ 32 ಪ್ರಕರಣಗಳು ಬೆಂಗಳೂರಿನಲ್ಲಿ ಕಂಡುಬಂದಿವೆ. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಅವರು ತಿಳಿಸಿದರು. ಈಗಾಗಲೇ ದೇಶದಲ್ಲಿ 257 ಪ್ರಕರಣಗಳು ದಾಖಲಾಗಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.




