ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಮಳೆಯ ಆರ್ಭಟಕ್ಕೆ ಬೆಣ್ಣೆ ಹೊಳೆಯ ಪರ್ಯಾಯ ರಸ್ತೆ ಕೊಚ್ಚಿಹೋಗಿದ್ದರಿಂದ ಕುಮಟಾ- ಶಿರಸಿ ಹೆದ್ದಾರಿಯಲ್ಲಿ ಸ್ಥಗಿತಗೊಂಡ ಸಂಚಾರ ಪುನರ್ ಆರಂಭವಾಗಿದ್ದು, ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಕಳೆದ ವಾರದಿಂದ ಮಳೆಯ ಅಬ್ಬರಕ್ಕೆ, ಬೆಣ್ಣೆ ಹೊಳೆ ತುಂಬಿ ಹರಿದಿದ್ದರಿಂದ ಕುಮಟಾ- ಶಿರಸಿ ಹೆದ್ದಾರಿ ಸಂಚಾರಕ್ಕಾಗಿ ನಿರ್ಮಿಸಲಾಗಿದ್ದ ಬೆಣ್ಣೆ ಹೊಳೆಯ ಪರ್ಯಾಯ ರಸ್ತೆ ಕೊಚ್ಚಿ ಹೋಗಿತ್ತು. ಇದರಿಂದ ಕುಮಟಾ- ಶಿರಸಿ ಹೆದ್ದಾರಿ ಸಂಚಾರ ಸ್ಥಗಿತಗೊಂಡು ಜನರಿಗೆ ತೊಂದರೆಯಾಗಿತ್ತು.ಈಗಾಗಲೇ ಈ ಹೆದ್ದಾರಿಯಲ್ಲಿ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಭಾರೀ ವಾಹನಗಳ ಸಂಚಾರ ನಿಷೇಧಿಸಿ, ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.

ಆದರೆ ಕಳೆದ ಒಂದು ವಾರದಿಂದ ಸುರಿದ ಮಳೆಯ ಆರ್ಭಟಕ್ಕೆ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಈಗ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಬೆಣ್ಣೆ ಹೊಳೆಯ ಪರ್ಯಾಯ ರಸ್ತೆಯ ಎರಡು ಬದಿಯಲ್ಲಿ ಮಣ್ಣು ತುಂಬಿ ಲಘು ವಾಹನಗಳು ಮಾತ್ರ ಸಂಚರಿಸಲು ವ್ಯವಸ್ಥೆ ಮಾಡಿಕೊಡಲಾಗಿದೆ.ಇದರಿಂದ ಒಂದು ವಾರದಿಂದ ಸಂಚಾರ ಸ್ಥಗಿತಗೊಂಡು ತೊಂದರೆ ಅನುಭವಿಸುತ್ತಿದ್ದ ಜನರಿಗೆ ಅನುಕೂಲವಾಗಿದೆ.

ಇದನ್ನೂ ಓದಿ