ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು:ಐಪಿಎಲ್ ಚಾಂಪಿಯನ್ RCB ತಂಡದ ವಿಜಯೋತ್ಸವಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದುರಂತ ನಡೆದಿದ್ದು, RCB ಸೆಲೆಬ್ರೇಷನ್ ನೋಡಲು ಸ್ಟೇಡಿಯಂಗೆ ಲಕ್ಷಾಂತರ ಜನರು ಮುಗಿಬಿದ್ದಿದ್ದಾರೆ. ಕ್ರೀಡಾಂಗಣಕ್ಕೆ ಎಂಟ್ರಿ ಕೊಡುವ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಿಂದಾಗಿ ಮಕ್ಕಳು ಸೇರಿದಂತೆ 11ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಬೆಂಗಳೂರಿನ ಸ್ಟಾಪ್ವೇರ್ ಉದ್ಯೋಗಿ ಸೇರಿ 11ಮಂದಿ ಸಾವನ್ನಪ್ಪಿದ್ದಾರೆ. ಸ್ಟೇಡಿಯಂ ಒಳಗೆ ಪ್ರವೇಶ ಮಾಡಲು ಆರ್ಸಿಬಿ ಅಭಿಮಾನಿಗಳ ಮಧ್ಯೆ ನೂಕು ನುಗ್ಗಲು ಉಂಟಾಗಿದೆ.. ಕಾಲ್ತುಳಿತದಲ್ಲಿ ಸಿಲುಕಿ ಹನ್ನೊಂದು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದರಲ್ಲಿ ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಉಸಿರಾಟದ ಸಮಸ್ಯೆ ಉಂಟಾಗಿ ಸಾವನ್ನಪ್ಪಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ಸಿಎಂ & ಡಿಸಿಎಂ ಭೇಟಿ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ದುರಂತದಲ್ಲಿ ಗಾಯಗೊಂಡು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.
7-30ಕ್ಕೆ ಸಿಎಂ ಸುದ್ದಿಗೋಷ್ಠಿ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ದುರಂತ ಘಟನೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರು 7-30ಕ್ಕೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿಯನ್ನ ಕರೆದಿದ್ದಾರೆ.
ಇದನ್ನೂ ಓದಿ