ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನೀಡಲಾಗಿದ್ದು,ವಿಚಾರಣಾಧಿಕಾರಿಯಾಗಿ ಜಗದೀಶ್ .ಜಿ, ಐಎಎಸ್,ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ
ಜಗದೀಶ್ ಅವರು ಈ ಹಿಂದೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಎಸಿಯಾಗಿ ಸಹ ಕಾರ್ಯನಿರ್ವಹಿಸಿದ್ದರು ಹಾಗೇ ಕರೋನಾ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಉತ್ತಮ ಆಡಳಿತ ನಡೆಸಿದ್ದರು. ಇದೀಗ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಸರಕಾರ ಜಗದೀಶ ಅವರನ್ನ ನೇಮಕ ಮಾಡಿದೆ.
ಬೆಂಗಳೂರಿನಲ್ಲಿ ಇಂದು ಬುಧವಾರ ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭವು ನಡೆಯುವ ಸಂದರ್ಭದಲ್ಲಿ ವಿಧಾನಸೌಧದ ಮುಂಭಾಗ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಸಂಖ್ಯೆಯಲ್ಲಿ ಏಕಾಏಕಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು. ಈ ಕಾರ್ಯಕ್ರಮವು ಅಲ್ಪ ಕಾಲದಲ್ಲಿ ನಿರ್ಧರಿತವಾಗಿದ್ದರಿಂದ, ತಕ್ಷಣಕ್ಕೆ ಸಾಧ್ಯವಾದ ಎಲ್ಲ ಬಂದೋಬಸ್ತ್ ವ್ಯವಸ್ಥೆಗಳನ್ನು ಏರ್ಪಡಿಸಲಾಗಿತ್ತು. ಆದರೂ, ಏಕಾಏಕಿ ಸಾವಿರಾರು ಅಭಿಮಾನಿಗಳು ಸೇರಿದ್ದರಿಂದ ಮಧ್ಯಾಹ್ನ 3:30 ಗಂಟೆಯಿಂದ 4:30 ಗಂಟೆಯ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ನುಗ್ಗುವಾಗ ಬ್ಯಾರಿಕೇಡ್ ಮುರಿದು ಒಬ್ಬರ ಮೇಲೆ ಒಬ್ಬರು ಬಿದ್ದು ಉಂಟಾದ ನೂಕು ನುಗ್ಗಲಿನಿಂದ ಕಾಲ್ತುಳಿತ ಉಂಟಾಗಿ,ಘಟನೆಯಲ್ಲಿ ಹನ್ನೊಂದು ಮಂದಿ ಮೃತರಾಗಿದ್ದಾರೆ. 47 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು, ಬೆಂಗಳೂರು ರವರು ಸಲ್ಲಿಸಿರುವ ವರದಿಯನ್ನು ಸರ್ಕಾರದಲ್ಲಿ ಕೂಲಂಕುಷವಾಗಿ ಪರಿಶೀಲಿಸಿದ್ದು ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು. ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಪೀರಿಯಲ್ ವಿಚಾರಣೆ ನಡೆಸಲು ಸರ್ಕಾರ ನಿರ್ಧರಿಸಿದೆ..
ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ಗಳ ಬಳಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು, ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಪೀರಿಯಲ್ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನಾಗಿ ಜಗದೀಶ್ .ಜಿ, ಐಎಎಸ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಿ ಆದೇಶಿಸಿದೆ.
ವಿಚಾರಣಾಧಿಕಾರಿಯವರು ಈ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಮ್ಯಾಜಿಸ್ಪೀರೀಯಲ್ ವಿಚಾರಣೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ