ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಬಡಿದ ಪರಿಣಾಮ ಗಾಯಗೊಂಡು ರಸ್ತೆ ಪಕ್ಕದಲ್ಲೇ ಕುಳಿತ ಘಟನೆ ತಾಲ್ಲೂಕಿನ ಚಂದಾವರದ ಚರ್ಚ್ ಬಳಿ ನಡೆದಿದೆ.

ಶನಿವಾರ ಚಂದಾವರ ಚರ್ಚ್ ಬಳಿ ಚಿರತೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆಯ ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ನಡೆದಾಡಲಾಗದೇ ಒದ್ದಾಡಿದ ಚಿರತೆ ರಸ್ತೆ ಪಕ್ಕದಲ್ಲಿಯೇ ಗಿಡಗಳ ಬಳಿ ಕುಳಿತಿದೆ.

ಚಿರತೆ ರಸ್ತೆ ಬಳಿ ಕುಳಿತ ಹಿನ್ನಲೆ ವಾಹನ ಸವಾರರು ಭಯದಿಂದ ಸಂಚರಿಸದೇ ರಸ್ತೆಯಲ್ಲೇ ನಿಂತಿದ್ದಾರೆ. ಇದರಿಂದಾಗಿ ಕುಮಟಾ ಸಿದ್ದಾಪುರ ಮಾರ್ಗದಲ್ಲಿ ವಾಹನ ದಟ್ಟಣೆ ಉಂಟಾಗಿತ್ತು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಯನ್ನ ಸೆರೆ ಹಿಡಿದು ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ