ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ 12 ರಿಂದ 14 ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ದಿನಗಳಲ್ಲಿ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಉತ್ತರ ಕನ್ನಡ
ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹರಾಮಾನ ಪರಿಸ್ಥಿತಿಯ ಕುರಿತಂತೆ 24*7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲಚಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ ಸಾರ್ವಜನಿಕರು ಯಾವುದೇ ಅನಧೀಕೃತ,ವದಂತಿಗಳಿಗೆ ಕಿವಿಗೊಡಬಾರದು. ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ತಗ್ಗು ಪ್ರದೇಶ, ಕೆರೆ,ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವಂತೆ ಸೂಚಿಸಲಾಗಿದೆ. ಇನ್ನೂ ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಕೃಷಿಕರು ಮಳೆ,ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರ ಇರಬೇಕಿದೆ.ಸಾರ್ವಜನಿಕರು, ಮಕ್ಕಳು,ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು ದುರ್ಬಲವಾದ/ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ/ಮರಗಳ ಕೆಳಗೆ ನಿಲ್ಲಬಾರದು. ಆಗತ್ಯವಿದ್ದಲ್ಲಿ ಮುಂಜಾಗ್ರತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದಾಗಿದೆ.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಆದಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಕುಸಿಯುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ಪಾನವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು.

ಅಗತ್ಯವಿದ್ದಲ್ಲಿ ಈಗಾಗಲೇ ಸಂಬoಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಸುರಕ್ಷಿತ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳಬಹುದಗಿದೆ. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ದಾಟುವ ಮುನ್ನ ಎಚ್ಚರಿಕೆ ವಹಿಸಬೇಕಿದೆ.

ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌoಡ್ ಅಥವಾ ಮನೆಯಗೋಡೆ ಕಂಡುಬoದಲ್ಲಿ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ : 24 *7 ಕಂಟ್ರೋಲ್ ರೂಂ-08382-229857, ವಾಟ್ಸಪ್ ನಂ: 9483511015 ದೂರವಾಣಿಗೆ ಮಾಹಿತಿ ನೀಡಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಗೆ ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ