ಅಹಮದಾಬಾದ್ : ಗುಜರಾಜ್‌ನಿಂದ ಲಂಡನ್‌ಗೆ ತೆರಳುತ್ತಿದ್ದ Air India ವಿಮಾನವೊಂದು ಅಪಘಾತ ಉಂಟಾಗಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾಲಿ ಗಂಭೀರವಾಗಿದ್ದು,ಇನ್ನೂ100ಕ್ಮೂ ಅಧಿಕ ಪ್ರಯಾಣಿಕರು ಸಾವನ್ನಪ್ಪಿದ್ದಾರೆನ್ನಲಾಗಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ವಿಮಾನದಲ್ಲಿ 242 ಪ್ರಯಾಣಿಕರಿದ್ದು ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ.. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು.
ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.“ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಘಟನೆಯ ಕುರಿತು ಪ್ರತಿಕ್ಷಣದ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು,ಇನ್ನೂ ಕೆಲವೇ ಕ್ಷಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಶೇಷ ವಿಮಾನದಲ್ಲಿ ಗುಜರಾತ್‌ನ ಅಹಮದಾಬಾದ್ ಗೆ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ..
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ರಾಜ್ಯದ್ಯಂತ ತಲುಪುತದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ರಾಜಕೀಯ ಅಪಘಾತ, ಕಳ್ಳತನ, ಮಳೆ ಹಾನಿ, ಯಾವುದೇ ಕ್ರೈಂ ಸೇರಿ ಸುದ್ದಿಯಾಗುವ ವಿಚಾರಗಳು ಯಾವುದೇ ಇದ್ದರೂ 9916127361 ಈ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸಲಾಗುವುದು.
ಇದನ್ನೂ ಓದಿ
- Cyclone/ವಾಯುಭಾರ ಕುಸಿತ ; ಉತ್ತರ ಕನ್ನಡದಲ್ಲಿ ಭಾರೀ ಗಾಳಿ-ಮಳೆ ಸಾಧ್ಯತೆ
- ಮನೆ ಕಳೆದುಕೊಂಡ ರಾಘವೇಂದ್ರ ನಾಯ್ಕರಿಗೆ ಅನಂತಮೂರ್ತಿ ಹೆಗಡೆ ಧನ ಸಹಾಯ
- Darshan arrest/ಕೊನೆಗೂ ನಟ ದರ್ಶನ ಆರೆಸ್ಟ್ : ಹೊಸಕೆರೆಹಳ್ಳಿಯಲ್ಲಿ ಬಂಧನ
- ಬಟ್ಟೆ ತೊಳೆಯುವ ಸ್ಥಳದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ..!