ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಜೂನ್ 17 ರವರೆಗೆ ಭಾರಿ ಮಳೆಯಾಗುವ ಸೂಚನೆ (ರೆಡ ಅಲರ್ಟ್) ಘೋಷಣೆಯಾಗಿದ್ದು ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ನಾಳೆ ಸಹ ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರೆಡ್ ಅಲರ್ಟ್ ಸಮಯದಲ್ಲಿ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾರವಾರ ಅಂಕೋಲಾ ಕುಮಟಾ ಹೊನ್ನಾವರ ಭಟ್ಕಳ ತಾಲೂಕಿನಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್:13 ರಂದು ರಜೆ ಘೋಷಿಸಲಾಗಿದೆ
ಇದನ್ನೂ ಓದಿ