ಸುದ್ದಿಬಿಂದು ಬ್ಯೂರೋ ವರದಿ
Karnataka rain report: ಕಾರವಾರ: ರಾಜ್ಯದಲ್ಲಿ ಅವಧಿಗೆ ಮುನ್ನವೇ ಸುರಿದ ಮಳೆ ಕೆಲ ದಿನಗಳಿಂದ ತಣ್ಣಗಾಗಿತ್ತು.ಆದರೆ ಇದೀಗ ಮತ್ತೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ಮುಂದಿನ ಮೂರು ದಿನಗಳ ಕಾಲ ಹಲವೆಡೆ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ಮೂರು ದಿನಗಳಿಂದ ಮಳೆ ತೀವ್ರಗೊಂಡಿದ್ದು, ಭಾರೀ ಮಳೆಯ ಪರಿಣಾಮವಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 14 ರಂದು ಎಲ್ಲೆಲ್ಲಿ ಮಳೆಯಾಗಲಿದೆ?: ಜೂನ್ 14ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿಯಲ್ಲಿದೆ. ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉಳಿದ ಜಿಲ್ಲೆಯವರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ