ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುದಗಾದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದುರಿನ‌ ಹೆದ್ದಾರಿಯಲ್ಲಿ ನಡೆದಿದೆ.

ತನುಷ್ ದುರ್ಗೆಕರ್ (24) ಯುವಕನಾಗಿದ್ದಾನೆ. ಈತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ ಸವಾರ ತನುಷ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ತನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನಿಬ್ಬರೂ ಬೈಕ್ ಸವಾರರು ಗಾಯಗೊಂಡಿದ್ದು, ಕಾರವಾರ ಕ್ರಿಮ್ಸ್ ಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ಕಾರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ