ಸುದ್ದಿಬಿಂದು ಬ್ಯೂರೋ ವರದಿ
ಮುಂಡಗೋಡ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯ ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದ್ದು, ಓರ್ವ ಗಾಯಗೊಂಡಿರುವ ಘಟನೆ ನಡೆದಿದೆ.
ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಮತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ