ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಹಳಿಯಾಳದ ಬಾರ್ನಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರೂ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ. ಈ ಘಟನೆಯಲ್ಲಿ ಪೊಲೀಸರೆ ಅವರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಈ ಅರೋಪ ಸತ್ಯಕ್ಕೆ ದೂರವಾಗಿದ್ದು ಎಂದು ಹೇಳಿದ್ದಾರೆ.
ಈ ಬಗ್ಗೆ ಕಾರವಾರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಎಸ್ ಪಿ ಎಂ.ನಾರಾಯಣ್ ಅವರು ನಿನ್ನೆ ಹಳಿಯಾಳದ ಬಾರ್ ಒಂದರಲ್ಲಿ ಕುಡಿದ ಮತ್ತಿನಲ್ಲಿ ಗಲಾಟೆ ಆಗಿದೆ. ಪಿಂಟೋ ಎಂಬ ವ್ಯಕ್ತಿ ಎಣ್ಣೆ ಮತ್ತಿನಲ್ಲಿ ಬಾಳು ಎಂಬುವವರ ತಲೆಗೆ ಬಾಟಲ್ ನಿಂದ ಹೊಡೆದಿದ್ದಾನೆ. ಬಾಟಲಿಯ ಗಾಜು ತಾಗಿ ರಕ್ತ ತಿವ್ರ ಸ್ರಾವದಿಂದ ಆಗಿದೆ.ಈ ಗಲಾಟೆ ತಾರಕಕ್ಕೆರುತ್ತಿದ್ದಂತೆ ನಮ್ಮ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ ಪರಿಸ್ಥಿತಿ ತಾರಕಕ್ಕೇರುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರ ಮೇಲೂ ದರ್ಪ ತೋರಿದ್ದಾನೆ. ಪೊಲೀಸರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೊಲೀಸರನ್ನ ತಳ್ಳಿದ್ದಾನೆ. ಎರಡ್ಮೂರು ಪೊಲೀಸರು ಆತನನ್ನ ಹಿಡಿದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇನ್ನೂ ಆಸ್ಪತ್ರೆಯಲ್ಲೂ ವೈದ್ಯರ ಮೇಲೆ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾನೆ
ಆರೋಪಿ ಪಿಂಟೋ ವಿರುದ್ದ ಈಗಾಲೇ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಪೊಲೀಸರು ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು, ಈ ಪ್ರಕರಣದಲ್ಲಿ ಪೊಲೀಸರ ಯಾವುದೇ ತಪ್ಪಿಲ್ಲ ಎಂದು ಎಸ್ಪಿ ಅವರು ಸ್ಪಷ್ಟ ಪಡಿಸಿದ್ದಾರೆ.
ಇದನ್ನೂ ಓದಿ :ಸಾತೊಡ್ಡಿ ಜಲಪಾತಕ್ಕೆ ಪ್ರವೇಶ ನಿಷೇಧ