ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ಭಾರಿ ಗಾಳಿ ಮಳೆಯ ಕಾರಣಕ್ಕಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಇಂದು ಮಂಗಳವಾರ ದಾಂಡೇಲಿ ತಾಲೂಕಿನ ಅಂಗನವಾಡಿ ಹಾಗೂ ಶಾಲಾ, ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ.

ತಾಲೂಕಿನಲ್ಲಿ ವ್ಯಾಪಕವಾಗಿ ಗಾಳಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲೆ ಕಾಲೇಜುಗಳಿಗೆ ಇಂದು ಮಂಗಳವಾರ ರಜೆಯನ್ನು ನೀಡಲಾಗಿದೆ ಎಂದು ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ:-ಅನಂತಕುಮಾರ ಹೆಗಡೆ ಬೆಂಬಲಿಗರಿಂದ ಹೆದ್ದಾರಿಯಲ್ಲೆ ಹಲ್ಲೆ