ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ದಶಕದಿಂದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ “ವಿ.ಆರ್. ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್” ಇದೀಗ ತನ್ನ 21ನೇ ವಾರ್ಷಿಕೋತ್ಸವವನ್ನು ಭವ್ಯವಾಗಿ ಆಚರಿಸಲಾತು.
ಈ ಟ್ರಸ್ಟ್‍ನ್ನು ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ತಂದೆ ವಿ.ಆರ್. ದೇಶಪಾಂಡೆ ಅವರ ಸ್ಮರಣಾರ್ಥವಾಗಿ ಸ್ಥಾಪಿಸಲಾಗಿದ್ದು,ಶಿಕ್ಷಣ ಮತ್ತು ಉದ್ಯೋಗ ತರಬೇತಿ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದೆ.. ಟ್ರಸ್ಟ್‌ನ ಮೂಲಕ ಅನೇಕ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಂಡಿದ್ದಾರೆ. .
ಟ್ರಸ್ಟ್‌ನ ಸ್ಥಾಪನೆಯ ದಿನವಾದ Foundation Day ಕಾರ್ಯಕ್ರಮವನ್ನ ಹಳಿಯಾಳದ ರುಡ್‌ಸೆಟ್ ಸಂಸ್ಥೆಯಲ್ಲಿ ನೆರವೇರಿಸಲಾಯಿತು. ಶಿಕ್ಷಣದಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಸನ್ಮಾನ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ : ಮಾಧ್ಯಮ ಕ್ಷೇತ್ರದಲ್ಲಿ ಭಾರೀ ಬದಲಾವಣೆ ಆಗಲಿದೆ : ಮಹಾಬಲ ಸೀತಾಳಬಾವಿ