ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಡಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಜುಲೈ 3, 2025 (ಗುರುವಾರ) ರಂದು ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರವು ಜುಲೈ 2ರಿಂದ 3ರ ವರೆಗೆ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆಯ ಆರೆಂಜ್ ಅಲರ್ಟ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಡಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜುಲೈ 3ರಂದು ರಜೆ ನೀಡಲಾಗಿದೆ.. ಹವಾಮಾನ ಸ್ಥಿತಿಗತಿಯ ಆಧಾರವಾಗಿ ಮುಂದಿನ ದಿನಗಳಲ್ಲಿ ಕ್ರಮಗಳನ್ನು ಮತ್ತಷ್ಟು ಅವಲೋಕಿಸಲಾಗುವುದು. ಜನತೆ ಮತ್ತು ಪೋಷಕರಿಗೆ ಕೋರಿಕೆಯಾಗಿದ್ದು, ಮಕ್ಕಳನ್ನು ಸುರಕ್ಷಿತ ಸ್ಥಳದಲ್ಲಿರಿಸಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ.

ಇದನ್ನೂ ಓದಿ :ಸಿದ್ದರಾಮಯ್ಯ ಅಧಿಕಾರಿಕಾರಕ್ಕೆ ಬಂದ ಮೇಲೆ ಅಭಿವೃದ್ದಿ ಕೆಲಸ ಅಧೋಗತಿಯತ್ತ ಸಾಗಿದೆ