ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ :ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮುದಗಾ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಹಾಗೂ ಟಾಟಾ ಏಸ್ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಓರ್ವ ವ್ಯಕ್ತಿಗೆ ಗಾಯಗೊಂಡಿದ್ದಾನೆ.
ಈ ಅಪಘಾತದಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು, ಕಾರ ಸಹ ಜಖಂ ಆಗಿದೆ. ಅಪಘಾತದ ತೀವ್ರತೆಗೆ ಟಾಟಾ ಏಸ್ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಇನ್ನೂ ಕಾರನ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನ 108 ಆಂಬುಲೆನ್ಸ್ ಮೂಲಕ ಅಂಕೋಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಂಕೋಲಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಪೊಲೀಸರು ವಾಹನಗಳನ್ನು ನಿಯಂತ್ರಿಸಿ ಸಂಚಾರ ಸುಗಮಗೊಳಿಸಿದ್ದಾರೆ.