ಸುದ್ದಿಬಿಂದು ಬ್ಯೂರೋ ವರದಿಸಾಗರ: ಏಷ್ಯಾಖಂಡದ ಎರಡನೇ ಅತೀ ದೊಡ್ಡ ಸೇತುವೆ ಹಾಗೂ ಶಿವಮೊಗ್ಗ ಜಿಲ್ಲೆಯ ಜನರ ಬಹು ನಿರೀಕ್ಷಿತ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ.
ಕಾರ್ಯಕ್ರಮಕ್ಕೆ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದೀಪ ಬೆಳಗಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾವಿರಾರು ಜನರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು, ಸ್ಥಳದಲ್ಲಿ ಉತ್ಸವದ ವಾತಾವರಣ ನಿರ್ಮಾಣವಾಗಿತ್ತು.
ಸಭಾ ವೇದಿಕೆಯಲ್ಲಿ ಅನೇಕ ಗಣ್ಯರು ಹಾಜರಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸ್ಥಳೀಯ ಶಾಸಕ ಚನ್ನಬಸಪ್ಪ, ಮಾಜಿ ಶಾಸಕ ಡಾ. ಧನಂಜಯ ಸರ್ಜಿ ಸೇರಿದಂತೆ ಹಲವಾರು ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಅಭಿಮತವನ್ನು ವ್ಯಕ್ತಪಡಿಸಿದರು.
ಸಿಗಂದೂರು ಸೇತುವೆ ಉದ್ಘಾಟನೆಯು ಈ ಭಾಗದ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲಾಗಲಿದ್ದು, ಜನತೆಗೆ ನೇರವಾಗಿ ಪ್ರಯೋಜನವಾಗಲಿದೆ ಎಂಬ ವಿಶ್ವಾಸವನ್ನು ಸಭೆಯಲ್ಲಿ ಭಾಗವಹಿಸಿದ ಪ್ರಮುಖ ನಾಯಕರು ವ್ಯಕ್ತಪಡಿಸಿದರು..
ಇದನ್ನೂ ಓದಿ : ಭಟ್ಕಳ ಸ್ಫೋಟ ಬೆದರಿಕೆ: ಪೊಲೀಸರ ತನಿಖೆಯಲ್ಲಿ ಮೊದಲ ಬೇಟೆ, ಇಬ್ಬರು ವಶಕ್ಕೆ