ಸುದ್ದಿಬಿಂದು ಬ್ಯೂರೋ ವರದಿ

ಕಾರವಾರ : ಉತ್ತರಕನ್ನಡ ಜಿಲ್ಲೆಯ ಮುಂಡಗೋಡ,ಶಿರಸಿಯಲ್ಲಿ ಸೇವೆ ಸಲ್ಲಿಸಿ ಹಾಲಿ ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ ಕೀರಪ್ಪ ಘಟಕಾಂಭ್ಳೆ ಕರ್ತವ್ಯದಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ,

ಮೃತ ಪಿಎಸ್‌ ಐ ಕೀರಪ್ಪ ಘಟಕಾಂಭ್ಳೆ ಅವರು ಮೂಲತಃ ಮುಂಡಗೋಡ ನಿವಾಸಿಯಾಗಿದ್ದರು. ಅವರು ಮುಂಡಗೋಡ, ಶಿರಸಿ ಪೊಲೀಸ್‌ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದು, ಕಳೆದ ಕೆಲ ತಿಂಗಳ ಹಿಂದಷ್ಟೆ ಪ್ರಮೋಶನ್ ಪಡೆದು ಪಿಎಸ್‌ ಐ ಆಗಿ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದು, ಆದರೆ ಅವರು ಇವತ್ತು ಸಂಜೆ ವೇಳೆಯಲ್ಲಿ ಕರ್ತವ್ಯದಲ್ಲಿ ಇರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದರೆ ಅವರ ಆತ್ಮಹತ್ಯೆಗೆ ಇದುವರೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಕಾರ ಮೇಲೆ ಮರ ಬಿದ್ದು ಮಹಿಳೆ ಸಾವು : ಗರ್ಭಿಣಿ ಸೊಸೆಗೆ ಆಸ್ಪತ್ರೆಗೆ ಕರೆತಂದಿದ್ದ ಅತ್ತೆ