ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ:ಕೆರೆಯಲ್ಲಿ ಈಜಲು ಹೋಗಿದ್ದ ಯುವನೋರ್ವ ಕೆರೆಯಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳಕಾರ ಗ್ರಾಮದ ಮಾವಿನ ಕೆರೆಯಲ್ಲಿ ನಡೆದಿದೆ..

ನಿಲೇಶ ಸೋಮೇಶ್ವರ ನಾಯ್ಕ,(29) ಮೃತ ಯುವಕನಾಗಿದ್ದಾನೆ. ಈತ ಮೂಲತಃ ಹೊನ್ನಾವರ ತಾಲೂಕಿನ ಕರ್ಕಿ ನಿವಾಸಿ ಎನ್ನಲಾಗಿದೆ. ಈತ ಸ್ನೇಹಿಯರೊಂದಿಗೆ ಕುಮಟಾ ತಾಲೂಕಿನ ಹಳಕಾರ ಗ್ರಾಮದಲ್ಲಿರುವ ಮಾವಿನ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದು, ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕೋಳಿಗೆ ಪೊಲೀಸ್ ಕಸ್ಟಡಿ; ಆರೋಪಿಗಳು ಪರಾರಿ