ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಈ ಬಸ್ ಯಲ್ಲಾಪುರ ಕಡೆಯಿಂದ ಮಂಗಳೂರಿಗೆ ಚಲಿಸುತ್ತಿದ್ದ ವೇಳೆ ಅಗಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18 ಜನರಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಬೆಳಗಿನ ಜಾವದಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯ ತೀವ್ರತೆಯಿಂದ ಕೆಲ ಪ್ರಯಾಣಿಕರು ಬಸ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಅಂಕೋಲಾ ಪೋಲಿಸ್‌ಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ..
ಗಂಭೀರವಾಗಿ ಗಾಯಗೊಂಡಿರುವ ಐದು ಮಂದಿ ಪ್ರಯಾಣಿಕರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಣ್ಣ ಪುಟ್ಟ ಗಾಯಗೊಂಡವರನ್ನು ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೋಲಿಸರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದು, ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಾದಪೂಜೆ ನೆರವೇರಿಸಿದ ಅನಂತಮೂರ್ತಿ ಹೆಗಡೆ