ಸುದ್ದಿಬಿಂದು ಬ್ಯೂರೋ ವರದಿ
Karwar/ಕಾರವಾರ: ಧರ್ಮಸ್ಥಳದಲ್ಲಿ ತಲೆ ಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ಎಸ್ಐಟಿಗೆ ನೀಡಬೇಕು ಎನ್ನುವ ಒತ್ತಡ ಹೆಚ್ಚಾಗಿರುವ ಹಿನ್ನಲೆಯಲ್ಲಿ ಇದೀಗ ತನಿಖೆಗಾಗಿ 20 ಮಂದಿ ಹೆಚ್ಚುವರಿ ಪೊಲೀಸ್‌ರನ್ನ ನಿಯೋಜನೆ ಮಾಡಲಾಗಿದೆ. ಈ ತಂಡದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. 

ಮಂಗಳೂರು ಡಿಸಿಆರ್‌ಇ ಎಸ್‌ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್ ಇಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್ಪೆಕ್ಟರ್ ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ,

ಬೈಂದೂರು ಇನ್ಸ್ಪೆಕ್ಟರ್ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್ಪೆಕ್ಟರ್ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ಆರ್.ಸುಹಾಸ್, ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್,

ಮಂಗಳೂರು ಮೆಸ್ಕಾಂ ಸಬ್‌ಇನ್ಸ್ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೆಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೆಬಲ್ ದೇವರಾಜ್ ಅವರುಗಳನ್ನ ನೇಮಕ ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ : ಭಾರೀ ಮಳೆ ಇಂದು ಶಾಲೆಗಳಿಗೆ ರಜೆ ಘೋಷಣೆ