ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ರಾಷ್ಟ್ರೀಯ ಹೆದ್ದಾರಿ 66ರ ಮಿರ್ಜಾನ ಸಮೀಪ ಕುದುರೆಹಳ್ಳದ ಬಳಿ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ನವೀನ್ ನಾಯ್ಕಗೆ ಗಂಭೀರವಾಗಿ ಗಾಯವಾಗಿದ್ದು, ಕುಮಟಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ನವೀನ್ ನಾಯ್ಕ ಮತ್ತು ಆತನ ಸ್ನೇಹಿತ ಗೋವಾದಲ್ಲಿದ್ದ ಕಾರೊಂದನ್ನು ತರುವುದಕ್ಕಾಗಿ ತೆರಳಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಇದರಿಂದಾಗಿ ಕಾರಿನಲ್ಲಿ ಇದ್ದ ಇಬ್ಬರು ಗಾಯಗೊಂಡಿದ್ದಾರೆ.
ಕಾರು ಪಲ್ಟಿಯಾದ ಪರಿಣಾಮ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಅಕ್ರಮ ಕ್ಲಬ್ ನಡೆಸುತ್ತಿದ್ದ ಡಾ.ಬಸವರಾಜ ಪೊಲೀಸ್ ವಶಕ್ಕೆ.?