ಸುದ್ದಿಬಿಂದು ಬ್ಯೂರೋ ವರದಿ
Sirsi/ಶಿರಸಿ:ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಕುರಿತು ಸಂಸದರು ಉತ್ತರ ನೀಡಬೇಕು ಎಂದು ಮೀನುಗಾರಿಕಾ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಅವರು ಶಿರಸಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವೈದ್ಯರು ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2022 ರಲ್ಲಿ ಮುಕ್ತಾಯಗೊಳ್ಳಬೇಕಿತ್ತು. 2025 ಆದರೂ ಪೂರ್ಣಗೊಂಡಿಲ್ಲ. ಕೇಂದ್ರ ಸರ್ಕಾರದ ಯೋಜನೆಯಾದ್ದರಿಂದ ಯಾರು ಮಾತನಾಡಬೇಕಿತ್ತೋ ಅವರು ಮಾತನಾಡುತ್ತಿಲ್ಲ.ಎಂದು ಕೇಂದ್ರ ಸರಕಾರದ ವಿರುದ್ಧ ಆರೋಪಿದ್ದಾರೆ.
ಶಿರಸಿ-ಹಾವೇರಿ, ಶಿರಸಿ-ಕುಮಟಾ, ಹುಬ್ಬಳ್ಳಿ-ಯಲ್ಲಾಪುರ ಹೆದ್ದಾರಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಟ್ಟಿದ್ದು. ಭಟ್ಕಳದಿಂದ ಗೋವಾವರೆಗೆ ಹಾದುಹೋದ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಜನಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ.ಹಲವಾರು ಸಭೆ ನಡೆಸಿ, ಎಚ್ಚರಿಕೆ ನೀಡಿ, ಅವರನ್ನು ಸರಿದಾರಿಗೆ ತರಲು ಪ್ರಯತ್ನಿಸಿದರೂ ಯಾರ ಮಾತೂ ಕೇಳುತ್ತಿಲ್ಲ ಎಂದು ತೀವ್ರ ಆಕ್ರೋಶ ಹೊರಹಾಕಿದರು.ಜಿಲ್ಲೆಯ ಕರಾವಳಿ ಭಾಗದಲ್ಲಿ ಗಾಳಿ-ಮಳೆಯ ಆರ್ಭಟದಿಂದ ಹಾನಿಯಾಗಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದರ ಮೂಲಕ ಅವರಿಗೆ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಕಲ್ಪಿಸಲಾಗುತ್ತಿದೆ ಎಂದರು. ಬಿಜೆಪಿ ಅವಧಿಯಲ್ಲಿ ಬಸ್ಸುಗಳನ್ನು ಖರೀಸಿದಿಲ್ಲ. ಕಳೆದ 7 ವರ್ಷಗಳಿಂದ ಚಾಲಕ-ನಿರ್ವಾಹಕರ ಖಾತೆ ಹುದ್ದೆಯನ್ನು ಭರ್ತಿ ಮಾಡಿಲ್ಲ. ಆದ್ದರಿಂದ ಸಮಸ್ಯೆಯಾಗಿರುವುದು ನಿಜ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಅದರ ಜತೆ ಕೆಎಸ್‌ಆರ್‌ಟಿಸಿಗೂ ಶಕ್ತಿ ತುಂಬುವ ಕೆಲಸ ಮಾಡಿದ್ದು, ಸ್ವಲ್ಪ ದಿನದಲ್ಲಿ ಉತ್ತರಕನ್ನಡ ಸಾರಿಗೆ ವಿಭಾಗಕ್ಕೆ 100 ಹೊಸ ಬಸ್ಸುಗಳು ಬರುತ್ತವೆ. ಚಾಲಕ-ನಿರ್ವಾಹಕರನ್ನು ಭರ್ತಿ ಮಾಡುತ್ತಿದ್ದೇವೆ ಎಂದರು.
ಇದನ್ನೂ ಓದಿ:“ಬೈರುಂಬೆ ಹೋಂ ಸ್ಟೇ: ಪೊಲೀಸರು ದಾಳಿ ಮಾಡಿದ್ರು, ಬೀಗ ಜಡಿಯೋದು ಯಾವಾಗ?