ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಎನ್ಎಚ್‌ಎಂ (ರಾಷ್ಟ್ರೀಯ ಆರೋಗ್ಯ ಮಿಷನ್) ಸಿಬ್ಬಂದಿಗಳ ಸೇವಾ ಮರು ನವೀಕರಣವನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಬುಧವಾರ ಕಾರವಾರದಲ್ಲಿ ಮಾಧ್ಯದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. NHM, “ಸಿಬ್ಬಂದಿಗಳ ಕೆಲಸದ ಗುಣಮಟ್ಟದ ಬಗ್ಗೆ ಮಾಹಿತಿ ಪಡೆಯಲಾಗಿತ್ತು. ಈ ಕಾರಣದಿಂದಲೇ ಮರು ನವೀಕರಣ (ರಿನಿವಲ್) ಪ್ರಕ್ರಿಯೆ ಸ್ವಲ್ಪ ಮುಂದುಡಲಾಗಿತ್ತು. ಇದರಿಂದ ಸಿಬ್ಬಂದಿಗಳಲ್ಲಿ ಆತಂಕ ಮೂಡಿದೆ. ಆದರೆ ಯಾರು ಕೂಡ ಗಾಳಿ ಸುದ್ದಿಗಳ ಬಗ್ಗೆ ಚಿಂತೆ ಪಡುವ ಅಗತ್ಯವಿಲ್ಲ,” ಎಂದು ಹೇಳಿದರು.
ಸಿಬ್ಬಂದಿ ತೆರವು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ತಿಳಿಸಿದ್ದು, ಶೀಘ್ರದಲ್ಲೇ ನವೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.