ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ : ನಿನ್ನೆ ಸಂಜೆ ಭಟ್ಕಳದ ಅಳ್ವೆಕೊಡಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿಬಿದ್ದ ಪರಿಣಾಮ ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ದುರ್ಘಟನೆ ನಡೆದಿದ್ದು, ಸುದ್ದಿ ತಿಳಿದ ಜಿಲ್ಲಾ ಉಸ್ತುವಾರಿ ಮಂಕಾಳ್ ವೈದ್ಯ ಅವರು ಬೆಂಗಳೂರಿಂದ ವಾಪಸ್ ಆಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಾಪತ್ತೆಯಾದ ಮೀನುಗಾರರಿಗಾಗಿ ಶೋಧ ಕಾರ್ಯ ಇಂದು ಸಹ ನಡೆಯುತ್ತಿದ್ದು, ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿನ್ನೆ ಸಂಜೆ ವೇಳೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ದೋಣಿ ಮುಳುಗಡೆಯಾಗಿ ನಾಲ್ವರು ನಾಪತ್ತೆಯಾಗಿದ್ದರು..
ಇನ್ನೂ ಸ್ಥಳಕ್ಕೆ ಬಂದ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರು ನಾಪತ್ತೆಯಾದ ಮೀನುಗಾರರ ಕುಟುಂಬ ಹಾಗೂ ಸಹಮೀನುಗಾರರಿಗೆ ದೈರ್ಯ ತುಂಬಿದ್ದು, ಶೋಧ ಕಾರ್ಯ ನಿರಂತರವಾಗಿ ನಡೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶೋಧ ಕಾರ್ಯದಲ್ಲಿ ಕರಾವಳಿ ಕಾವಲು ಪಡೆ, ಸ್ಥಳೀಯ ಮೀನುಗಾರರು ಹಾಗೂ ರಕ್ಷಣಾ ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ.