ಸುದ್ದಿಬಿಂದು ಬ್ಯೂರೋ‌ ವರದಿ
ಶಿರಸಿ: ಉತ್ತರಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ನಿವಾಸಿಗಳಾಗಿರುವ ಇಬ್ಬರು ಬಾಲ ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ನಡೆದಿದೆ.

8ನೇ ತರಗತಿ ಹಾಗೂ 6ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು, “ಚಿತ್ರಕಲೆ ತರಗತಿಗೆ ಹೋಗಿ ಬರುವುದಾಗಿ ಹೇಳಿ ಮಧ್ಯಾಹ್ನ ಮನೆಯಿಂದ ಹೊರಟಿದ್ದು, ಬಳಿಕ ಇದುವರೆಗೂ ಮನೆಗೆ ವಾಪಾಸಾಗಿಲ್ಲ.

ಕಾಣೆಯಾದ ವಿದ್ಯಾರ್ಥಿಗಳ ಪೋಷಕರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಡಿವೈಎಸ್ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಶಶಿಕಾಂತ ವರ್ಮಾ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ವಿದ್ಯಾರ್ಥಿನಿಯರ ಪತ್ತೆಗಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಧರ್ಮಸ್ಥಳ ಸಾಮೂಹಿಕ ಸಮಾಧಿ ರಹಸ್ಯ: ಅನಾಮಿಕ ಬಿಚ್ಚಿಟ್ಟ ಸ್ಫೋಟಕ ಮಾಹಿತಿ