ಸುದ್ದಿಬಿಂದು ಬ್ಯೂರೋ ವರದಿ(ಅಪರಾಧ‌ ಸುದ್ದಿ)
ಬಳ್ಳಾರಿ: ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಪಿಎಸ್‌ಐ ಪತ್ನಿ ನೇಣು ಬಿಗಿದುಕೊಂಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೋಕಾ ಠಾಣೆಯ ಪಿಎಸ್‌ಐ ಕೆ.ಕಾಳಿಂಗ ಅವರ ಪತ್ನಿ ಚೈತ್ರಾ (36) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ, ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತಮ್ಮ ಪತಿ ಹಾಗೂ ಮಕ್ಕಳನ್ನು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕಳುಹಿಸಿ ಬಳಿಕ ತಾವು ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಆತ್ಮಹತ್ಯಗೆ ನಿಖರವಾದ ಕಾರಣ ಇದುವರಗೆ ತಿಳಿದು ಬಂದಿಲ್ಲ., ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ  ಶಂಕೆ ವ್ಯಕ್ತವಾಗಿದೆ.ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ:ಭೀಕರ ರಸ್ತೆ ದುರಂತ: ಬಸ್–ಲಾರಿ ಡಿಕ್ಕಿ, ಮೂವರು ಸಾವು – ಏಳು ಮಂದಿ ಗಂಭೀರ”