ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲೆಗಳು ಹಾಗೂ ಕಾಲೇಜುಗಳಿಗೆ ನಾಳೆ  ಸೋಮವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಅತಿವೃಷ್ಟಿ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಈ ಆದೇಶ ಹೊರಡಿಸಲಾಗಿದೆ.

ಆಗಸ್ಟ್ 18ರಂದು ಶಾಲಾ-ಕಾಲೇಜುಗಳಿಗೆ ರಜೆ ಅನ್ವಯವಾಗುತ್ತದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ , ಸಿದ್ದಾಪುರ,‌ಯಲ್ಲಾಪುರ, ಜೊಯೀಡಾ, ದಾಂಡೇಲಿ ತಾಲೂಕುಗಳ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು ರಜೆ ನೀಡಲಾಗಿದೆ.
ಭಾರೀ ಮಳೆಯ ಪರಿಣಾಮವಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಕೆರೆ-ಕೊಳಗಳೂ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಅಕ್ಕನ ಮಗನ ಜೀವ ತೆಗೆದ ಮಾವ