ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಹವಮಾನ ಇಲಾಖೆ ಈ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ನಿನ್ನೆಯಿಂದ ರಾಜ್ಯದ ಹಲವು ಜಿಲ್ಲೆತಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಅದೆ ರೀತಿ ಜಿಲ್ಲೆಯ ಕರಾವಳಿಯ ಮೂರು ಜಿಲ್ಲೆಯಲ್ಲಿ ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸುಚನೆ ನೀಡಿದೆ. ಭಾರೀ ಮಳೆ ಹಿನ್ನಲೆಯಲ್ಲಿ ತಗ್ಗು ಪ್ರದೇಶದಲ್ಲಿನ ಜನರಿಗೆ ಎಚ್ಚರಿಕೆ ನೀಡಲಾಗಿದೆ..ಭಾರೀ ಮಳೆ ಹಿನ್ನಲೆಯಲ್ಲಿ ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಪ್ರವಾಸಿಗರು ಸಹ ಕಡಲ ತೀರ ಹಾಗೂ ಫಾಲ್ಸ್ಗಳತ್ತ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ಪುತ್ರಿ ಜೊತೆ ದೇವರ ದರ್ಶನ : ಜನರ ಸುಖ-ಶಾಂತಿಗಾಗಿ ಪ್ರಾರ್ಥಿಸಿದ ಸಚಿವ ಮಂಕಾಳ ವೈದ್ಯ