ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಇಂದು ಕರಾವಳಿ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ ಸದ್ಯ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಂದು ಬೆಳಿಗ್ಗೆ ಜಿಲ್ಲಾಡಳಿತವು ರಜೆ ನಿರ್ಧಾರ ಕೈಗೊಂಡಿತ್ತು. ಈಗಾಗಲೇ ಮಳೆ ಹಿನ್ನಲೆಯಲ್ಲಿ ಸಾಕಷ್ಟು ರಜೆ ನೀಡಿರುವುದರಿಂದ, ಮುಂದಿನ ದಿನಗಳಲ್ಲಿ ಶನಿವಾರ ಪೂರ್ತಿ ದಿನ ಶಾಲೆ ನಡೆಸುವ ಮೂಲಕ ಮಳೆಗಾಲದಲ್ಲಿ ನೀಡಲಾದ ರಜೆಗಳನ್ನು ಸರಿದೂಗಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:ಭಾಸ್ಕೇರಿ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ನೆರವಾದ ಕಾಂಗ್ರೇಸ್ ಮುಖಂಡ ಮಂಜುನಾಥ ಎಲ್. ನಾಯ್ಕ