ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ : ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ದೇಹವ ಕೆರೆಯಲ್ಲಿ ಪತ್ತೆ ಮಾಡಲಾಗಿದೆ.
ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವ ಮೊದಲು ಆಕೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯ ಡಿಆರ್‌ಯಲ್ಲಿ ಎಆರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್‌ಐ ಸಂತೋಷಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : Car accident/ಕಾರವಾರದಲ್ಲಿ ಕಾರು ಅಪಘಾತ : ಪುತ್ತೂರು ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವು