ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಹಳಿಯಾಳ ಶಾಸಕರೂ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆದ ಹಿರಿಯ ರಾಜಕಾರಣಿ ಆರ್.ವಿ. ದೇಶಪಾಂಡೆ ಅವರು ಮಹಿಳಾ ಪತ್ರಕರ್ತೆಯೊಬ್ಬರ ಪ್ರಶ್ನೆಗೆ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿ ದೇಶಪಾಂಡೆ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.
“ಆರ್.ವಿ. ದೇಶಪಾಂಡೆ ಅವರು ರಾಜಕೀಯ ಹಾಗೂ ಸಾಮಾಜಿಕ ಬದುಕಿನಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ನಾಯಕರು. ಜಿಲ್ಲೆಯ ಪ್ರಮುಖ ಸಮಸ್ಯೆ ಬಗ್ಗೆ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಶಾಂತವಾಗಿ ಹಾಗೂ ಸಮಂಜಸವಾಗಿ ಉತ್ತರ ನೀಡಬೇಕಿತ್ತು. ಆದರೆ ಅವರು ನೀಡಿದ ಅವಹೇಳನಕಾರಿ ಹೇಳಿಕೆ ಶೋಭೆ ತರುವಂತಹದಲ್ಲಿ ಎಂದಿದ್ದಾರೆ.