ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 432ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ನರ್ಸಿಂಗ್ ಸಿಬ್ಬಂದಿ ಕೊರತೆಯನ್ನು ನಿವಾರಿಸುವ ಉದ್ದೇಶದಿಂದ ಈ ಬೃಹತ್ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಸರ್ಕಾರಿ ಸೇವೆಯಲ್ಲಿ ನರ್ಸಿಂಗ್ ವೃತ್ತಿ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇದು ಉದ್ಯೋಗ ಭದ್ರತೆ ಜೊತೆಗೆ ಸಾಮಾಜಿಕ ಸೇವೆ ಸಲ್ಲಿಸುವ ಸುವರ್ಣಾವಕಾಶವಾಗಿದೆ.

ನೇಮಕಾತಿಯ ಪ್ರಮುಖ ಗುರಿಗಳು:
ಹಳ್ಳಿಗಳಲ್ಲಿಯೂ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವುದು,ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೆಲಸದ ಒತ್ತಡ ಕಡಿಮೆ ಮಾಡುವುದು,ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣದ ವೈದ್ಯಕೀಯ ನೆರವು ಒದಗಿಸುವುದು ತಾಯಿ-ಮಗು  ಆರೋಗ್ಯ ಸೇವೆಗಳನ್ನು ಬಲಪಡಿಸುವುದು. ಈ ಹುದ್ದೆಗಳ ಭರ್ತಿಯು ಕೇವಲ ಉದ್ಯೋಗಾವಕಾಶವಲ್ಲದೆ, ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆ ಎಂದು ಸರ್ಕಾರ ತಿಳಿಸಿದೆ.

ಹುದ್ದೆಗಳ ವಿವರ:
ಹುದ್ದೆಯ ಹೆಸರು: ಸ್ಟಾಫ್ ನರ್ಸ್
ಒಟ್ಟು ಹುದ್ದೆಗಳು: 432
ವೇತನ 42,800
ವಿಭಾಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಕೆಲಸದ ಸ್ಥಳ: ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಕೇಂದ್ರಗಳು
ಅರ್ಜಿಯ ವಿಧಾನ: ಸಂಪೂರ್ಣ ಆನ್‌ಲೈನ್
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಧಿಕೃತ ವೆಬ್‌ಸೈಟ್: hfwcom.karnataka.gov.in

ಇದನ್ನೂ ಓದಿ : ಬಸ್ ನಿಲ್ದಾಣದಲ್ಲಿ ಮೃತಪಟ್ಟ ಭಿಕ್ಷುಕನ ಅಂತ್ಯಸಂಸ್ಕಾರ