ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾದ ಸಿ ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದು ಸಂತಸದ ಸಂಗತಿಯಾಗಿದ್ದು, ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಿ ಪಿ ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಹುದ್ದೆಗೆ ಅತ್ಯಂತ ಅರ್ಹ ಹಾಗೂ ಸೂಕ್ತವಾದ ಆಯ್ಕೆಯಾಗಿದೆ. ಅವರ ಆಯ್ಕೆಯಿಂದ ದಕ್ಷಿಣ ಭಾರತಕ್ಕೂ ಪ್ರಾಧಾನ್ಯತೆ ದೊರೆತಂತಾಗಿದೆ. ಈ ಆಯ್ಕೆಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್ ಡಿ ಎ ಯಲ್ಲಿ ಭಾಗಿಯಾಗಿರುವ ಎಲ್ಲ ಪಕ್ಷಗಳ ನಾಯಕರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.