ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ, ಸನಾತನ ಧರ್ಮ ಜಾಗೃತಿ ಪ್ರತಿಷ್ಠಾನದ ಜಿಲ್ಲಾಧ್ಯಕ್ಷ ಎಂಜಿ ಭಟ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಇಂತಹ ಘೋಷಣೆಗಳು ದೇಶದ ಏಕತೆ ಮತ್ತು ಶಾಂತಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದ್ದಾರೆ.
“ಇಂತಹ ಘಟನೆಗಳು ಮರುಕಳಿಸದಂತೆ ನಿಖರವಾದ ತನಿಖೆ ನಡೆಸಿ,ಇದರ ಹಿಂದಿರುವವರ ಉದ್ದೇಶವನ್ನು ಪತ್ತೆಹಚ್ಚಬೇಕು. ಕಾನೂನಿನಡಿ ಕಠಿಣ ಕ್ರಮ ಕೈಗೊಂಡರೆ ಮಾತ್ರ ಇಂತಹ ಚಟುವಟಿಕೆಗಳಿಗೆ ಕಡಿವಾಣ ಬೀಳಬಹುದು,” ಎಂದು ತಿಳಿಸಿದ್ದಾರೆ, ಜನತೆ ಶಾಂತಿ ಕಾಪಾಡಿಕೊಂಡು ಕಾನೂನು ಮತ್ತು ಸುವ್ಯವಸ್ಥೆಗೆ ಸಹಕಾರ ನೀಡುವಂತೆ ಎಂಜಿ ಭಟ್ ಮನವಿ ಮಾಡಿದ್ದಾರೆ.