ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಬೇಲೇಕೇರಿ ಬಂದರಿನಿಂದ ಅಕ್ರಮ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಇಂದು ಜಾಮೀನು ಸಿಕ್ಕಿದ್ದು, ಇದರಿಂದಾಗಿ ಶಾಸಕ ಸೈಲ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ..
ಮಂಗಳವಾರ ರಾತ್ರಿ ಇಡಿ ಅಧಿಕಾರಿಗಳಿಂದ ಬಂಧಿತರಾದ ಸೈಲ್ ಅವರನ್ನು ನಿನ್ನೆ ಬೆಳಿಗ್ಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ಬಳಿಕ, ನ್ಯಾಯಾಧೀಶರು ಸೈಲ್ ಅವರಿಗೆ ಎರಡು ದಿನಗಳ ಕಾಲ ಇಡಿ ವಶಕ್ಕೆ ನೀಡುವಂತೆ ತೀರ್ಪು ನೀಡಿದರು.
ಅದರೆ ಈ ಬಗ್ಗೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಶಾಸಕ ಸತೀಶ್ ಸೈಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದ್ದು, ಇದರಿಂದಾಗಿ ಸೈಲ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಆಗಸ್ಟ್ 13-14ರಂದು ಇಡಿ ಅಧಿಕಾರಿಗಳು ಕಾರವಾರ ಶಾಸಕ ಸತೀಶ್ ಸೈಲ್ ಅವರ ಕಾರವಾರದ ಮನೆ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಬೇಲೇಕೇರಿ ಬಂದರಿನಿಂದ ನಡೆದ ಅಕ್ರಮ ಕಬ್ಬಿಣದ ಅದಿರು ಸಾಗಾಟಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಈ ದಾಳಿ ನಡೆಸಲಾಗಿತ್ತು.