ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ :ತರಕಾರಿ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾದ ಪರಿಣಾಮ, ಲಾರಿಯಲ್ಲಿದ್ದ ತರಕಾರಿ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ ಸಮೀಪದ ಕುದುರೆಹಳ್ಳದ ಬಳಿ ನಡೆದಿದೆ.

ತರಕಾರಿ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಿರ್ಜಾನ ಸಮೀಪದ ಕುದುರೆಹಳ್ಳದ ಬಳಿ ಪಲ್ಟಿಯಾಗಿದ್ದು, ಇದರಿಂದಾಗಿ ಕೆಲ ಸಮಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಲಾರಿ ಪಲ್ಟಿಯಾದ ಪರಿಣಾಮ, ಲಾರಿ ಚಾಲಕ ಸೇರಿ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಪಲ್ಟಿಯಾದ ಲಾರಿಯನ್ನು ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ದಸರಾ ವೇಳೆ ಬಂಗಾರದ ದರ ಕುಸಿತ‌ ಸಾಧ್ಯೆ