ಸುದ್ದಿಬಿಂದು ಬ್ಯೂರೋ ವರದಿ
Kumta/ಕುಮಟಾ: ತಾಲೂಕಿನ ಹೆಗಡೆ ಕ್ರಾಸ್ನಲ್ಲಿ ನಿರ್ಮಿಸಿರುವ ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಯೋಜನೆಯಾದ ಇಂದಿರಾ ಕ್ಯಾಂಟೀನ್ ನ ಉದ್ಘಾಟನಾ ಕಾರ್ಯಕ್ರಮ ನಾಳೆ (ಸೆಪ್ಟೆಂಬರ್ 17, ಬುಧವಾರ) ಬೆಳಿಗ್ಗೆ 11:30ಕ್ಕೆ ನಡೆಯಲಿದೆ.
ಕಾರ್ಯಕ್ರಮವನ್ನು ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮಾಂಕಾಳ್ ವೈದ್ಯ ಅವರು ಉದ್ಘಾಟಿಸಲಿದ್ದಾರೆ. ಜೊತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವ ಅವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ತಾಲೂಕು ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಸೆಲ್ ಅಧ್ಯಕ್ಷರು ಮತ್ತು ಸದಸ್ಯರು, ಮಾಜಿ ಜಿಲ್ಲಾಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು, ಗ್ಯಾರಂಟಿ ಅಧ್ಯಕ್ಷರು, ಸರ್ಕಾರ ನಾಮ ನಿರ್ದೇಶಿತ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಪಕ್ಷದ ಎಲ್ಲಾ ಹಿರಿಯ-ಕಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿದ ಸಿಎಂ