ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಶಾಲಾ, ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕಾಗಿ ಸಮಯಕ್ಕೆ ಸರಿಯಾಗಿ ದೇವಳಮಕ್ಕಿ,ನಗೆಕೋವೆ, ಮಲ್ಲಾಪುರ, ಹಳಗೆಜೂಗ, ಶಿರ್ವೆ ಮತ್ತು ಮುಡಗೇರಿ ಪ್ರದೇಶಗಳಿಗೆ ನಿಗದಿತ ಸಮಯಕ್ಕೆ ಬಸ್ ಸಂಚಾರ ಕಲ್ಪಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ರಸ್ತೆ ಸಾರಿಗೆ ಸಂಸ್ಥೆಯ ಕಾರವಾರ ಘಟಕದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗೆ ಹಾಜರಾಗ ಬೇಕಾದ ಅನಿವಾರ್ಯತ ಇದೆ. ಆದರೆ ಸಮಯಕ್ಕೆ ಸರಿಯಾಗಿ ಬಸ್ ಸಂಚಾರದ ಕೊರತೆಯಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಸಮಸ್ಯೆ‌ ಎದುರಿಸುವಂತಾಗಿದೆ..

ಹೀಗಾಗಿ ಬೆಳಗ್ಗೆ 7 ಗಂಟೆಗೆ ಮಲ್ಲಾಪುರ ಮಾರ್ಗದ ಬಸ್,
ಹಳಗೆಜೂಗಕ್ಕೆ ವಸತಿ ಬಸ್, ಹಾಗೂ ದೇವಳಮಕ್ಕಿ, ನಗೆಕೋವೆ, ಶಿರ್ವೆ, ಮುಡಗೇರಿ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾನಿಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಸಾರಿಗೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ದೇವಳಮಕ್ಕಿ ಗ್ರಾಮಪಂಚಾಯತ್ ಅಧ್ಯಕ್ಷ ಸಂತೋಷ ಗೌಡ, ಅಸ್ನೋಟಿ ಗ್ರಾಮಪಂಚಾಯತ್ ಅಧ್ಯಕ್ಷ ಸಂಜಯ ಸಾಳುಂಕೆ, ಮುಡಗೇರಿ ಗ್ರಾಮಪಂಚಾಯತ್ ಅಧ್ಯಕ್ಷ ನಂದಕಿಶೋರ ನಾಯ್ಕ, ಹಾಗೂ ಸುಭಾಷ ಗುನಗಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬನವಾಸಿ,ಸಿದ್ದಾಪುರ ಸಾಗರಕ್ಕೆ ಸೇರ್ಪಡೆ ತಿರುಕನ ಕನಸು: ಶಾಸಕ ಶಿವರಾಮ ಹೆಬ್ಬಾರ