ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳಲ್ಲೇ ಇಬ್ಬರೂ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ..

 

 

ಅಂಕೋಲಾದಿಂದ ಯಲ್ಲಾಪುರ ಕಡೆಗೆ ತೆರಳುತ್ತಿದ್ದ ಲಾರಿ, ಹಾಗೂ ಎದುರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತರಾಗಿದ್ದಾರೆ. ಗಾಯಗೊಂಡವರನ್ನು ತಕ್ಷಣ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಅಂಕೋಲಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಂತರ ಟ್ರಾಫಿಕ್ ನಿಯಂತ್ರಣಕ್ಕೆ ತರಲಾಗಿದೆ.

ಇದನ್ನೂ ಓದಿ : ಹೊನ್ನಾವರದಲ್ಲಿ ಚಾಕು ಇರಿತ ಓರ್ವ ಗಂಭೀರ : ಆರೋಪಿ ಅದ್ನಾನ್ ಸಂಶಿ ಬಂಧನ